ಸರಳವಾಗಿ ರಿಜಿಸ್ಟರ್ ಮದುವೆಯಾದ ಖ್ಯಾತ ಕಿರುತೆರೆ ನಟಿ.. ಯಾರು ಗೊತ್ತಾ..??
ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ಪ್ರಿಯಾಂಕಾ ಚಿಂಚೋಳಿ ಅವರು ರಾಕೇಶ್ ಎಂಬುವವರ ಜೊತೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ.
ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿ ನಟಿ ಪ್ರಿಯಾಂಕಾ ಚಿಂಚೋಳಿ ಅವರು ಮದುವೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಪ್ರಿಯಾಂಕಾ ಅವರು ರಾಕೇಶ್ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ನಟಿ ಪ್ರಿಯಾಂಕಾ ಚಿಂಚೋಳಿ, “ರಾಕೇಶ್ ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದೇನೆ. 2021ರ ಡಿಸೆಂಬರ್10ರಲ್ಲಿ ಸಂಪ್ರದಾಯಬದ್ಧವಾಗಿ ಮದುವೆಯಾಗಲಿದ್ದೇನೆ. ಈಗಷ್ಟೇ ಮದುವೆ ಸಂಭ್ರಮ ಶುರುವಾಗಿದೆ. ನಿಮ್ಮೆಲ್ಲರ ಪ್ರೀತಿ-ಹಾರೈಕೆ ಬೇಕು” ಎಂದು ಹೇಳಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಪ್ರಿಯಾಂಕಾ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಪ್ರಿಯಾಂಕಾ ‘ಪ್ರೇಮಿಗಳ ದಿನ’ದಂದು ಬೆಳಗ್ಗೆ ಸಾಂಪ್ರದಾಯಿಕ ಸೀರೆ ಉಟ್ಟು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸಂಜೆ ಕೆಂಪು ಬಣ್ಣದ ಉಡುಗೆ ತೊಟ್ಟು ಔತಣಕೂಟದಲ್ಲಿ ಮಿಂಚಿದ್ದರು