ದುಬಾರಿ ಕಾರು ಖರೀಸಿದ ಬಿಗ್ ಬಾಸ್ ಸೀಸನ್-8ರ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಧನುಶ್ರೀ. ಹಣ ಬಂದದ್ದು ಯಾರಿಂದ?
ಕನ್ನಡದ ಅತಿ ದೊಡ್ಡ ರೀಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8ರಲ್ಲಿ ಭಾಗವಹಿಸಿದ ಟಿಕ್ ಟಾಕ್ ಸ್ಟಾರ್ ಧನುಶ್ರೀ ಮೊದಲನೇ ವಾರವೇ ಎಲಿಮಿನೇಟ್ ಆಗಿದ್ದರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದರು. ಇದೀಗ ಧನುಶ್ರೀ ಹೊಸ ಕಾರನ್ನು ಖರೀದಿಸಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಸ್ವಂತ ದುಡಿಮೆಯಲ್ಲಿ ಖರೀದಿಸಿರುವ ಕಾರೆಂದು ಫೋಟೋಗಳನ್ನೂ ಸೋಷಿಯಲ್ ಮೀಡಿಯಾದಲ್ಲಿ ಧನುಶ್ರೀ ಹಂಚಿಕೊಂಡಿದ್ದಾರೆ
ಜೊತೆಗೆ ಹಾರ್ಡ್‌ವರ್ಕ್ ಪೇಸ್ ಅಪ್. ನನ್ನ ಮೊದಲ ಹೆಜ್ಜೆ. ಯಾರು ಇದೆಲ್ಲಾ ಸುಲಭದ ಕೆಲಸ ಅಂತೆಲ್ಲಾ ಜನ ಮಾತನಾಡಿಕೊಳ್ಳಬಹುದು. ಆದರೆ ಯಾವುದೇ ಕೆಲಸವಾಗಲಿ, ಅದಕ್ಕೆ ಅದರದ್ದೇ ಆದ ಸವಾಲುಗಳು ಇರುತ್ತವೆ. ಅದು ಎಲ್ಲರಿಗೂ ಗೊತ್ತಾಗುವುದಿಲ್ಲ. ನಾನು ಅನುಭವಿಸಿರುವ ಕಷ್ಟಗಳು ಹಾಗೂ ಶ್ರಮಕ್ಕೆ ನನಗೆ ನಾನು ಥ್ಯಾಂಕ್ಸ್ ಹೇಳಬೇಕು ನನ್ನ ಜರ್ನಿಯಲ್ಲಿ ಜೊತೆಗಿದ್ದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಧನುಶ್ರೀ ಹೊಸ ಮಾರುತಿ ಸ್ವಿಫ್ಟ್ ಕಾರನ್ನು ಖರೀದಿಸಿದ್ದಾರೆ. ಈ ಹೊಸ ಕಾರನ್ನು ವಿತರಣೆ ಪಡೆಯುವ ಫೋಟೋಗಳನ್ನೂ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರಗಳ ಕೆಳಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ
ಬಿಗ್ ಬಾಸ್‌ನಲ್ಲೂ ಕಾಣಿಸಿಕೊಳ್ಳವ ಮುನ್ನ ಧನುಶ್ರೀ ತಮ್ಮ ಟಿಕ್ಟಾಕ್ ವೀಡಿಯೊಗಳ ಮೂಲಕ ಲಕ್ಷಾಂತರ ಮಂದಿ ಫಾಲೋವರ್ಸ್ ಹೊಂದುವ ಮೂಲಕ ಆಗಲೇ ಸ್ಟಾರ್ ಆಗಿದ್ದರು. ನಂತರ ಬಿಗ್ ಬಾಸ್ ಮನೆಗೆ ಕಾಲಿಡುವ ಮೂಲಕ ಮತ್ತಷ್ಟು ಖ್ಯಾತಿ ಪಡೆದಿದ್ದರು.
ಇವರು ಡ್ಯುಯಲ್ ಟೋನ್ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ಖರೀದಿಸಿದ್ದಾರೆ. ಈ ಮಾರುತಿ ಸ್ವಿಫ್ ಕಾರಿನ ಬಗ್ಗೆ ಹೇಳುವುದಾದರೆ,ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.