ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್
ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ.
ತುಮಕೂರು: ಮದುವೆಯನ್ನ ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡುತ್ತಾನೆ ಅನ್ನೊ ಮಾತಿದೆ. ಋಣ ಸಂಬಂಧ ಇದ್ದರೆ ಎಲ್ಲೇ ಇದ್ದರೂ, ಹೇಗಾದರೂ ಒಂದಾಗುತ್ತಾರೆ ಅನ್ನೋ ಮಾತುಗಳು ಕೂಡ ಇವೆ. ಅದೇ ರೀತಿ ಈ ಮಾತುಗಳು ನಿಜವೆಂಬಂತೆ 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಫೋಟೋಗಳು ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.
ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದಾಳಂತೆ.
ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.