ಅಪ್ಪು ಸಾವಿನಲ್ಲಿ ನಡೆದಿದೆ ಮಹಾ ಮೋಸ,ಪುನೀತ್ ಸಾವಿನ ಬಗ್ಗೆ ತನಿಖೆ ನಡೆಸಿ…
ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿಗೆ ಅವರ ಕುಟುಂಬ ವೈದ್ಯರ ನಿರ್ಲಕ್ಷ್ಯವೇ ಕಾರಣ ಆರೋಪಿಸಿ, ಈ ಸಂಬಂಧ ಬಗ್ಗೆ ತನಿಖೆ ನಡೆಸುವಂತೆ ಕೋರಿ ಪುನೀತ್ ಅಭಿಮಾನಿಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅರುಣ್ ಪರಮೇಶ್ವರ್ ದೂರು ನೀಡಿದ್ದು, ಪುನೀತ್ ರಾಜ್‌ಕುಮಾರ್‌ಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಅವರು ರಮಣಶ್ರೀ ಆಸ್ಪತ್ರೆಗೆ ಹೋಗಿದ್ದಾರೆ. ಪುನೀತ್ ರಾಜ್‌ಕುಮಾರ್‌ಗೆ ಅಲ್ಲಿ ಸೂಕ್ತ ಚಿಕಿತ್ಸೆಯೂ ಸಿಕ್ಕಿದಂತೆ ಕಾಣುತ್ತಿಲ್ಲ. ಅವರನ್ನು ತಡವಾಗಿ ವಿಕ್ರಮ್ ಆಸ್ಪತ್ರೆಗೆ ಸೇರಿಸಲಾಗಿದೆ. ವಿಕ್ರಮ್ ಆಸ್ಪತ್ರೆಗೆ ಸಾಗಿಸಲು ರಮಣಶ್ರೀ ಆಸ್ಪತ್ರೆ ಕಡೆಯಿಂದ ಆಂಬ್ಯೂಲೆನ್ಸ್ ಕೂಡ ಮಾಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಸತ್ಯಾಸತ್ಯತೆ ಬಹಿರಂಗವಾಗಬೇಕು.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಪುನೀತ್ ರಾಜ್‌ಕುಮಾರ್ ಎಷ್ಟು ಸಮಯಕ್ಕೆ ರಮಣಶ್ರೀ ಆಸ್ಪತ್ರೆಗೆ ದಾಖಲಾದರು. ಎದೆನೋವಿನ ಬಗ್ಗೆ ಹೇಳಿದಾಗ ಎಷ್ಟು ನಿಮಿಷಗಳ ಕಾಲ ರಮಣಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಯಾವ್ಯಾವ ಮಾತ್ರೆಗಳನ್ನು ಅಲ್ಲಿ ನೀಡಲಾಗಿತ್ತು. ಆ ಬಳಿಕ ಅವರು ಆಸ್ಪತ್ರೆಯಿಂದ ಎಷ್ಟು ಸಮಯಕ್ಕೆ ವಿಕ್ರಮ್ ಆಸ್ಪತ್ರೆಗೆ ತೆರಳಿದರು. ಆಸ್ಪತ್ರೆಗೆ ಹೋಗಲು ರಮಣಶ್ರೀ ಆಸ್ಪತ್ರೆಯಿಂದ ಏನು ವ್ಯವಸ್ಥೆ ಮಾಡಲಾಗಿತ್ತು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಬೇಕಿದೆ. ಈ ಕುರಿತು ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಅರುಣ್ ಪರಮೇಶ್ವರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪುನೀತ್‌ಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಕುಟುಂಬ ವೈದ್ಯರು ಎಂದು ಭಾವಿಸಿದ್ದ ಡಾ. ರಮಣರಾವ್ ಬಳಿ ತೆರಳಿದ್ದರು. ಹೃದಯಾಘಾತಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಿಲ್ಲ. ವಿಕ್ರಮ್ ಆಸ್ಪತ್ರೆಗೆ ರವಾನಿಸುವಲ್ಲಿ ತಡವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ದೂರು ದಾಖಲಾಗಿದೆ.
.